



ಮಂಗಳೂರು: ಸರಕು ಸಾಗಣೆ ರೈಲಿನ ಗ್ಯಾಸ್ ಟ್ಯಾಂಕ್‌ನಿಂದ ಗ್ಯಾಸ್ ಸೋರಿಕೆ ಶಂಕೆ ಹಿನ್ನೆಲೆಯಲ್ಲಿ ರೈಲನ್ನು ಮರಳಿ ಮಂಗಳೂರಿಗೆ ತರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರಿನ ಜೋಕಟ್ಟೆ ಬಳಿ ರೈಲ್ವೆ ಹಳಿ ಸುತ್ತಮುತ್ತ ಜನಸಂಚಾರ ನಿರ್ಬಂಧ ವಿಧಿಸಲಾಗಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್ಪಿಸಿಎಲ್) ನಿಂದ ಟ್ಯಾಂಕರ್‌ಗಳಲ್ಲಿ ಗ್ಯಾಸ್ ತುಂಬಿಸಿ ಕಳುಹಿಸಲಾಗಿತ್ತು. ಆದರೆ, ರೈಲು ಏಳು ಕಿಲೋಮೀಟರ್ ತಲುಪಿದ ಬಳಿಕ ಗ್ಯಾಸ್ ಸೋರಿಕೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರೈಲು ಮರಳಿ ಹೆಚ್ಪಿಸಿಎಲ್‌ಗೆ ಆಗಮಿಸಿದೆ.
ಸರಕು ಸಾಗಣೆ ರೈಲಿನಲ್ಲಿ ಮಂಗಳೂರಿನಿಂದ ಗ್ಯಾಸ್ ತುಂಬಿದ ಟ್ಯಾಂಕರ್‌ಗಳನ್ನು ಸಾಗಿಸಲಾಗುತ್ತಿತ್ತು. ಆದರೆ, ಟ್ಯಾಂಕರ್‌ವೊಂದರಲ್ಲಿ ಮಾರ್ಗ ಮಧ್ಯೆ ಗ್ಯಾಸ್ ಸೋರಿಕೆಯಾಗುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಹೆಚ್ಪಿಸಿಎಲ್ ರೈಲು ಹಿಂದಿರುಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
ರೈಲು ಪ್ರಯಾಣಿಸಿದ ಏಳು ಕಿಲೋ ಮೀಟರ್ ದಾರಿ ಮಧ್ಯೆ ಗ್ಯಾಸ್ ಸೋರಿಕೆಯಾದ ಹಿನ್ನೆಲೆಯಲ್ಲಿ ಜೋಕಟ್ಟೆ ಮತ್ತು ಸುತ್ತ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.