logo
WhatsApp Image 2026-04-02 at 14.46.04.jpeg
hindalco everlast.jpeg

ಈಜು ಸ್ಪರ್ಧೆ : ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಜ್ಞಾನಸುಧಾ ಪ್ರೌಢ ಶಾಲೆಯ ಸಾಧನೆ

ಟ್ರೆಂಡಿಂಗ್
share whatsappshare facebookshare telegram
11 Sept 2023
post image

ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ (ಆಡಳಿತ) ಉಡುಪಿ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆ ೨೦೨೩-೨೪ ಹಾಗೂ ಟಿ.ಎಂ.ಪೈ ಆಂಗ್ಲ ಮಾಧ್ಯಮ ಶಾಲೆ,ಕುಂಜಿಬೆಟ್ಟು, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಬಾಲಕ-ಬಾಲಕಿಯರ ಈಜು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಕು. ಭೂಮಿ ೮ನೇ ತರಗತಿ ಇವರು ೧೪ ವರ್ಷ ವಯೋಮಿತಿಯ ಬಾಲಕಿಯರ 50ಮೀ ಫ್ರೀ ಸ್ಟೈಲ್ ಮತ್ತು 100ಮೀ ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 59ಮೀ ಬ್ಯಾಕ್ ಸ್ಟ್ರೋಕ್ ಸ್ಪರ್ಧೆಯಲ್ಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್‌ಶಿಪ್‌ ನೊಂದಿಗೆ ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರನ್ನು ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ, ಸಿ.ಇ.ಒ., ಪ್ರಾಂಶುಪಾಲರು ಹಾಗೂ ಶಾಲಾ ಶಿಕ್ಷಕ ವೃಂದ ಅಭಿನಂದಿಸಿ, ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಗೆ ಶುಭವನ್ನು ಹಾರೈಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.