



ಚೆನೈ: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಕಾಲಿಟ್ಟಿದ್ದು, ಅಂತಿಮವಾಗಿ ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ ಅನ್ನು ಇಂದು ಪ್ರಾರಂಭಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ನಟ ವಿಜಯ್ “ನಾವು 2024 ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಜೊತೆಗೆ ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ನಾವು ಈ ನಿರ್ಧಾರವನ್ನು ಸಾಮಾನ್ಯ ಹಾಗೂ ಕಾರ್ಯಕಾರಿ ಮಂಡಳಿ ಸಭೆಗಾಗಿ ಮಾಡಿದ್ದೇವೆ” ಎಂದರು.
ಇನ್ನು ನಟ ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರಾಗಿರುತ್ತಾರೆ. ಅವರು ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಈ ಮೂಲಕ ತಮಿಳು ಸಿನಿಮಾ ರಂಗದಲ್ಲಿ ಹಾಗೂ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಳ್ಳಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.