logo
WhatsApp Image 2026-04-02 at 14.46.04.jpeg
hindalco everlast.jpeg

ಟ್ಯಾಟೂನಿಂದ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ :ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಟ್ರೆಂಡಿಂಗ್
share whatsappshare facebookshare telegram
28 Feb 2025
post image

ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಆಯುಕ್ತ ಶ್ರೀನಿವಾಸ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವರು, ಟ್ಯಾಟೂನಿಂದ ಆರೋಗ್ಯ ಸಮಸ್ಯೆಗಳ ಸಾಧ್ಯತೆ ವಿಚಾರವಾಗಿ ಕೇಂದ್ರ ಸರ್ಕಾರ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ನಂತರ ಟ್ಯಾಟೂ ಪಾರ್ಲರ್ ಗಳನ್ನು ನಿಯಂತ್ರಿಸಲು ಕಾನೂನು ರೂಪಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಚರ್ಮ ಕ್ಯಾನ್ಸರ್, ಹೆಚ್​ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿಯಂತಹ ಮಾರಣಾಂತಿಕ ಸೋಂಕುಗಳು ಜನರಲ್ಲಿ ಹೆಚ್ಚಾಗುತ್ತಿವೆ. ಇಂತಹ ಸೋಂಕುಗಳು ಹೆಚ್ಚಾಗಲು ಟ್ಯಾಟೂ ಹಾಕಿಸುವುದು ಕೂಡ ಒಂದು ಕಾರಣ ಎಂಬುದು ಆರೋಗ್ಯ ಇಲಾಖೆ ನಡೆಸಿರುವ ತಪಾಸಣೆಯಿಂದ ತಿಳಿದುಬಂದಿದೆ. ಅಷ್ಟೆಅಲ್ಲದೆ ಟ್ಯಾಟೂವನ್ನು ಹಾಕುವಾಗ ಬಳಸುವ ಬಣ್ಣದಲ್ಲಿ ಅಪಾಯಕಾರಿ ಮೆಟಲ್ ಬಳಕೆಯಾಗುತ್ತಿರುವುದು ಕಂಡುಬಂದಿದೆ. ಇದು ಸಹ ಮನುಷ್ಯನ ದೇಹಕ್ಕೆ ಅಪಾಯಕಾರಿಯಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಟ್ಯಾಟೂ ನಿಯಂತ್ರಿಸಲು ಹೊಸ ಕಾನೂನು ಜಾರಿಗೆ ಮುಂದಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.