logo
WhatsApp Image 2026-04-02 at 14.46.04.jpeg
hindalco everlast.jpeg

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಟ್ರೆಂಡಿಂಗ್
share whatsappshare facebookshare telegram
5 Sept 2026
post image

ನಡೂರು: ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮ ಹಾಗೂ ಗೌರವದಿಂದ ಆಚರಿಸಲಾಯಿತು. ಭಾರತದ ಶ್ರೇಷ್ಠ ಶಿಕ್ಷಣತಜ್ಞ ಹಾಗೂ ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕರ ಮಹತ್ವ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರ ಪಾತ್ರ ಹಾಗೂ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆಯನ್ನು ಸ್ಮರಿಸಲಾಯಿತು.

ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಶುಭಾಶಯಗಳನ್ನು ತಿಳಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನರಂಜನಾ ಚಟುವಟಿಕೆಗಳ ಮೂಲಕ ಶಿಕ್ಷಕರಿಗೆ ಗೌರವ ಸಲ್ಲಿಸಿದರು. ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ, ಅವರ ಸೇವೆ ಮತ್ತು ಸಮರ್ಪಣೆಯನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಸ್ಮರಣಿಕೆ ಯನ್ನು ನೀಡಿ ಗೌರವಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.