



ಉಡುಪಿ:
ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸೈಕಲ್ ನಲ್ಲಿ ತೆರಳಿ ಅರಿವು ಮೂಡಿಸುತ್ತಿರುವ ಪದವೀಧರ ಕಿರಣ್ ಅವರು ರಾಜ್ಯದೆಲ್ಲೆಡೆ ಕಳೆದ 65 ದಿನಗಳಿಂದ ಸೈಕಲ್ ಯಾತ್ರೆ ನಡೆಸಿ ಮಣಿಪಾಲಕ್ಕೆ ಆಗಮಿಸಿದ್ದಾರೆ.
ಈಗಾಗಲೇ ಅವರು 3500 ಕಿಮೀ. ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಕಾರ್ಮಿಕ ಸಂಘಟನೆಯ ದ.ಕ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪದ್ಮಶ್ರೀ ಭಟ್ ನಿಡ್ಡೋಡಿ ಅವರನ್ನು ಭೇಟಿ ಮಾಡಿದರು. ಅವರ ಈ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಸಲ್ಲಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.