



ತೆಲಂಗಾಣ: ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಂಗಳವಾರ ಮಧ್ಯರಾತ್ರಿ ಕರೀಂ ನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ಪೊಲೀಸರ ತಂಡ ಕರೀಂ ನಗರದಲ್ಲಿರುವ ಸಂಸದರ ನಿವಾಸಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದರು.
ಈ ವೇಳೆ ಬಂಡಿ ಸಂಜಯ್ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸಂಜಯ್ ಕುಮಾರ್ ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಬಂಡಿ ಸಂಜಯ್ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತೆಲಂಗಾಣ ಬಿಜೆಪಿ ನಾಯಕರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಿಕಂದರಾಬಾದ್‌ನಿಂದ ತಿರುಪತಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉದ್ಘಾಟಿಸುವ ಜತೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.