



ನವದೆಹಲಿ: ‘ಭಾರತೀಯ ವಾಯುಪಡೆಯು (ಐಎಎಫ್) ಸುಮಾರು 50, ಮಿಗ್-21 ಯುದ್ಧ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತೀರ್ಮಾನಿಸಿದೆ’ ಎಂದು ಮೂಲಗಳು ಶನಿವಾರ ತಿಳಿಸಿವೆ.
ಎರಡು ವಾರಗಳ ಹಿಂದೆ ಮಿಗ್-21 ವಿಮಾನವೊಂದು ರಾಜಸ್ಥಾನದ ಹನುಮಾನಗಢದ ಮನೆಯೊಂದರ ಮೇಲೆ ಪತನವಾಗಿತ್ತು. ಘಟನೆಯಲ್ಲಿ ಮನೆಯಲ್ಲಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
‘ಎಲ್ಲಾ ಮಿಗ್ ವಿಮಾನಗಳನ್ನೂ ತಾಂತ್ರಿಕ ಪರಿಶೀಲನೆಗೆ ಕಳುಹಿಸಲಾಗುತ್ತದೆ. ಸಂಬಂಧಪಟ್ಟ ತಜ್ಞರ ತಂಡವು ಒಪ್ಪಿಗೆ ಸೂಚಿಸಿದ ಬಳಿಕವಷ್ಟೇ ಅವುಗಳ ಮರು ಹಾರಾಟಕ್ಕೆ ಅನುಮತಿ ನೀಡಲಾಗುತ್ತದೆ’ ಎಂದು ಮೂಲಗಳು ಹೇಳಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.