


ಕೋಟ: ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಹಿರಿಯ ಆರ್‌ಎಸ್‌ಎಸ್ ಮುಖಂಡರೊಬ್ಬರಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ ಬಳಿ ಅ. 26ರ ಮುಂಜಾನೆ ನಡೆದಿದೆ.
ಕೋಟದ ಮಣೂರು ನಿವಾಸಿ ಗುರುದಾಸ್ ಶೆಣೈ (65) ಮೃತಪಟ್ಟವರು.
ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ ಬಳಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಅಪ್ಪಳಿಸಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಾಯಗೊಂಡ ಚಾಲಕ ಎಂದು ಗುರುತಿಸಲಾಗಿದೆ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.