

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳ್ಳೂರು ಟೋಲ್ ಬಳಿ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್‌ಬಾಗ್ (64) ಹಾಗೂ ಬಸ್ ಕ್ಲೀನರ್ ಅಶೋಕ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.