



ವಾಷಿಂಗ್ಟನ್: ಸೀಟ್‌ಬ್ಯಾಕ್ ಫ್ರೇಮ್‌ಗಳನ್ನು ಭದ್ರಪಡಿಸುವ ಬೋಲ್ಟ್‌ಗಳು ಸುರಕ್ಷಿತವಾಗಿ ಮತ್ತು ಬಿಗಿಯಾಗಿಲ್ಲ ಎಂದು ಕಾರಣ ನೀಡಿ ಟೆಸ್ಲಾ ಕಂಪನಿ 3,470 ಕಾರುಗಳನ್ನ ಹಿಂದಕ್ಕೆ ಪಡೆದಿದೆ.
ಅಮೆರಿಕದಲ್ಲಿ ಬಿಡುಗಡೆ ಮಾಡಿದ `ಮಾಡೆಲ್ ವೈ’ 2ನೇ ಸಾಲಿನಲ್ಲಿರುವ ಸೀಟ್ ಬ್ಯಾಕ್ ಫ್ರೇಮ್‌ಗಳನ್ನು ಭದ್ರಪಡಿಸುವ ಬೋಲ್ಟ್‌ಗಳು ಸುರಕ್ಷಿತವಾಗಿಲ್ಲ ಎಂದು ಶನಿವಾರ ಹೇಳಿದೆ.
ನ್ಯಾಷನಲ್ ಹೈವೇ ಟ್ರಾಫಿಕ್ ಸೇಫ್ಟಿ ಅಡ್ಮಿನಿಸ್ಟ್ರೇಷನ್ ಈ ಬಗ್ಗೆ ಪ್ರತಿಕ್ರಿಯಿಸಿ, ಸಡಿಲವಾದ ಸೀಟ್ ಫ್ರೇಮ್ ಬೋಲ್ಟ್, ಸೀಟ್ ಬೆಲ್ಟ್ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಕಡಿಮೆಮಾಡುತ್ತದೆ. ಜೊತೆಗೆ ಅಪಘಾತದ ಸಮಯದಲ್ಲಿ ಗಾಯ ಹಾಗೂ ಸಾವಿನ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಪರಿಶೀಲಿಸುವುದಾಗಿ ಟೆಸ್ಲಾ ಹೇಳಿದೆ. 2ನೇ ಸಾಲಿನ ಡ್ರೈವರ್ ಸೈಡ್ ಮತ್ತು ಪ್ಯಾಸೆಂಜರ್ ಸೈಡ್ ಸೀಟ್ ಬ್ಯಾಕ್ ಫ್ರೇಮ್‌ಗಳ ಬೋಲ್ಟ್ಗಳನ್ನು ಪರಿಶೀಲಿಸಲಾಗುತ್ತದೆ. ಅಗತ್ಯವಿದ್ದರೆ ಅವುಗಳನ್ನು ಸುರಕ್ಷಿತಗೊಳಿಸುವ (ಬಿಗಿಗೊಳಿಸುವ) ಕೆಲಸ ಮಾಡುತ್ತದೆ ಎಂದು ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.