



ಶಿವಮೊಗ್ಗ : ಇಂದು ಲೋಕಾರ್ಪಣೆಯಾಗಲಿರುವ ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಇಂದು ಕೊಡಲಿದೆ ಎಂದು ಘೋಷಿಸಲಾಗಿದೆ. ಪ್ರವಾಸೋದ್ಯಮಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ವಿಫುಲ ಅವಕಾಶಗಳಿವೆ. ವಿಮಾನ ನಿಲ್ದಾಣದಿಂದ ಇದಕ್ಕೆ ಉತ್ತೇಜನ ದೊರೆಯಲಿದೆ ಎಂದು ಹೇಳಲಾಗುತ್ತಿದೆ.
ಬೆಳಿಗ್ಗೆ 11.30ಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗ ಪ್ರವಾಸ ಮುಗಿಸಿದ ಬಳಿಕ ಪ್ರಧಾನಿ ಮೋದಿ ಬೆಳಗಾವಿಗೆ ತೆರಳಲಿದ್ದಾರೆ. ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ 80 ನೇ ಹುಟ್ಟು ಹಬ್ಬ ಕೂಡ ಆಗಿದೆ. ಬಿಎಸ್ ವೈ ಹುಟ್ಟು ಹಬ್ಬದಂದೇ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಯಾಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.