



ಉಡುಪಿ; ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.ಕಾರ್ಕಳದ ದುರ್ಗ ಗ್ರಾಮದ ನಿವಾಸಿ ಸಂದೇಶ್ ಶೆಟ್ಟಿ ಎಂಬವರು ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರ ದುರ್ಗ ತೆಳ್ಳಾರು ಸಂಪರ್ಕ ಸೇತುವೆ ಯಡಿ ಪತ್ತೆಯಾಗಿದೆ.
ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿತ್ತು. ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡಿದೆ.ಇದನ್ನು ಗಮನಿಸಿದ ಸ್ಥಳೀಯರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮೇಲಕ್ಕೆತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.