logo
WhatsApp Image 2026-04-02 at 14.46.04.jpeg
hindalco everlast.jpeg

ಬಾವಿಗೆ ಹಾರಿ ಬಸ್ ಚಾಲಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
12 Jul 2023
post image

ಕಾರ್ಕಳ : ಬಸ್ ಚಾಲಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯ್ಯಾರು ಗ್ರಾಮದ ಕುಂಠಿಬೈಲಿನಲ್ಲಿ ನಡೆದಿದೆ.

ಹರೀಶ್ ಶೆಟ್ಟಿ (50) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಹರೀಶ್ ಶೆಟ್ಟಿ ಖಾಸಗಿ ಬಸ್ಸೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಯಾವುದೋ ವಿಚಾರದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಾರ್ಕಳ ಅಗ್ನಿಶಾಮಕ ದಳದ ಠಾಣಾಧಿಕಾರಿ ಅಲ್ಬರ್ಟ್ ಮೋನಿಸ್ ಮತ್ತು ಅವರ ತಂಡ ಶವವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.