



ಕಾರವಾರ: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು ಕಾರು ಪಲ್ಟಿಯಾಗಿ ಚಾಲಕ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಧಾರೇಶ್ವರದಿಂದ ಚಂದಾವರ ಮಾರ್ಗವಾಗಿ ಸಾಗರಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಪಾಯಕಾರಿ ತಿರುವಿನಲ್ಲಿ ವೇಗವಾಗಿ ಆಗಮಿಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.