logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಜಯಬೇರಿ ಬಾರಿಸುವಂತಾಗಬೇಕು . ವೀರಪ್ಪ ಮೊಯ್ಲಿ

ಟ್ರೆಂಡಿಂಗ್
share whatsappshare facebookshare telegram
28 Nov 2021
post image

ಕಾರ್ಕಳ : ಕಾರ್ಕಳ ಹಾಗೂ ಹೆಬ್ರಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಾರ್ಕಳದ ಬಿಲ್ಲವ ಸಮಾಜ ಭವನದಲ್ಲಿ ನಡೆಯಿತು.

ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಮಾತನಾಡಿ, ಮಂಜುನಾಥ ಭಂಡಾರಿಯವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು. ಈ ಮೂಲಕ ಕಾರ್ಕಳದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಜಯಬೇರಿ ಬಾರಿಸುವಂತಾಗಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಜನಪ್ರತಿನಿಧಿಗಳ ಜೊತೆ ಸಮಾಲೋಚನಾ ಮಾತುಗಳನ್ನಾಡಿದರು.

ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಹಿರಿಯ ಕಾಂಗ್ರೆಸ್ ಮುಖಂಡ ಭರತ್ ಮುಂಡೋಡಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಕೃಷ್ಣ ಮೂರ್ತಿ, ಭಾಸ್ಕರ್ ಮೊಯಿಲಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅನಿತಾ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ಸ್ವಾಗತಿಸಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.