



ನವದೆಹಲಿ: ಭಾರತದಲ್ಲಿ ರೈತರ ಆಕ್ರೋಶಕ್ಕೆ ಕಾರಣವಾಗಿದ್ದ ವಿವಾದಿತ ಕೃಷಿಕಾಯ್ದೆಗಳನ್ನು ಕೇಂದ್ರ ಸರ್ಕಾರದಿಂದ ವಾಪಸ್ ಪಡೆಯುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಬಗ್ಗೆ ಹೇಳಿದರು.ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಇದೀಗ ಸಮ್ಮತಿ ಸೂಚಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.