



ಬೆಂಗಳೂರು: ಶಾಲೆರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್-ಕೇಸರಿ ಶಾಲು ವಿವಾದದ ಕುರಿತಾಗಿ ಹೈಕೋರ್ಟ್ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು. ಶೀಘ್ರವೇ ಶಾಲಾ ಕಾಲೇಜು ಆರಂಭಿಸಿ ಎಂದು ಸೂಚಿಸಿದೆ.
ಮುಖ್ಯಮಂತ್ರಿಗಳು ಮಹತ್ವದ ಸಭೆ ನಡೆಸಿದ್ದು, ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲೆ ಆರಂಭಿಸಲಾಗುವುದು. ಮೊದಲ ಹಂತದಲ್ಲಿ ಹೈಸ್ಕೂಲ್ ಅಂದ್ರೆ 10ನೇ ತರಗತಿವರೆಗೆ ತರಗತಿಗಳನ್ನ ಆರಂಭಿಸಲಾಗುದು. ನಂತ್ರ ಪಿಯುಸಿ ಪ್ರಾರಂಭಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು' ಎಂದಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.