



ಬೆಂಗಳೂರು: ದೇಶದ ಮೊತ್ತ ಮೊದಲಬಾರಿಗೆ ರ್ಯಾಪಿಡ್ ರಸ್ತೆಯನ್ನು ಕಳೆದ ತಿಂಗಳು ಬೆಂಗಳೂರಿನಲ್ಲಿ ನಿರ್ಮಾಣ ಮಾಡಲಾಗಿತ್ತು .ಬಿಬಿಎಂಪಿ ಕಾರ್ಮಿಕರೊಬ್ಬರು ಕಾಂಕ್ರೀಟ್ ಬ್ಲಾಕ್‌ಗಳ ನಡುವಿನ ಬಿರುಕನ್ನು ಟಾರ್‌ನಿಂದ ತುಂಬುತ್ತಿರುವುದು ಕಂಡುಬಂದಿದೆ. ಐದಾರು ಕಾಂಕ್ರೀಟ್ ಬ್ಲಾಕ್‌ಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೆಲ ವಾಹನ ಸವಾರರು ರಸ್ತೆಯ ಕಳಪೆ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ನಿರ್ಮಾಣಕ್ಕೆ ಹೊಸ ತಂತ್ರಜ್ಞಾನ ಅಳವಡಿಸುವ ಮುನ್ನ ಬಿಬಿಎಂಪಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಗರದ ಇತರ ರಸ್ತೆಗಳನ್ನು ನಿರ್ಮಿಸಲು ಆರ್‌ಆರ್‌ಟಿಯನ್ನು ಬಳಸುವುದ ಬಗ್ಗೆ ಮುಂದೆ ಯೋಚಿಸಲಾಗುವುದು. ಇದು ಹಳೆ ಮದ್ರಾಸ್ ರಸ್ತೆಯ ವಿಸ್ತರಣೆಯ ಬಾಳಿಕೆ ಅವಲಂಬಿಸಿರುತ್ತದೆ ಎಂದು ಹೇಳಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.