



ಬೆಂಗಳೂರು: ತಾಯಿಯನ್ನೇ ಕೊಂದು ಸೂಟ್‌ಕೇಸಿನಲ್ಲಿ ಪೊಲೀಸ್ ಠಾಣೆಗೆ ಶವ ತಂದು ಆತಂಕ ಸೃಷ್ಟಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.
ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯಿಸುವುದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರ ನುಂಗಿಸಿದ್ದಾಳೆ.
ತಾಯಿ ಹೊಟ್ಟೆ ನೋವು ಎಂದಾಗ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ್ಯಾಲಿ ಸೂಟ್ ಕೇಸಿನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್‌ಗೆ ಬಂದಿದ್ದಾಳೆ.
ಬಿಳೇಕಳ್ಳಿಯ NSR ಗ್ರೀನ್ ಅಪಾರ್ಟ್ಮೆಂಟ್ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.
ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್‌ನನ್ನು ಬಂಧಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.