logo
WhatsApp Image 2026-04-02 at 14.46.04.jpeg
hindalco everlast.jpeg

ಕುಂಭಾಶಿ ಗ್ರಾಮದಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು

ಟ್ರೆಂಡಿಂಗ್
share whatsappshare facebookshare telegram
6 Aug 2022
post image

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ಕುಂಭಾಶಿ ಗ್ರಾಮದ ವಿನಾಯಕ ನಗರ ಎಂಬಲ್ಲಿ ಆ.5ರಂದು ಬೆಳಕಿಗೆ ಬಂದಿದೆ. ವಿನಾಯಕ ನಗರ ನಿವಾಸಿ ಮಂಜುನಾಥ ಜೋಗಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಇವರು ಜುಲೈ 29ರಂದು ಕುಟುಂಬ ಸಮೇತರಾಗಿ ಪಂಡರಿಪುರ ಮತ್ತು ಶಿರ್ಡಿ ದೇವಸ್ಥಾನಕ್ಕೆ ತೆರಳಿದ್ದರು. ತೀರ್ಥಯಾತ್ರೆ ಮುಗಿಸಿಕೊಂಡು ಆ.5ರಂದು ಬೆಳಿಗ್ಗೆ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವ ವಿಚಾರ ಗೊತ್ತಾಗಿದೆ. ಕಳ್ಳರು ಮನೆಯ ಹಿಂಬದಿಯ ಬಾಗಿಲು ಮತ್ತು ಅಡುಗೆ ಮನೆಯ ಬಾಗಿಲನ್ನು ಒಡೆದು ಒಳಪ್ರವೇಶಿಸಿ, ಮನೆಯ ಕಪಾಟಿನಲ್ಲಿದ್ದ 8 ಗ್ರಾಂ ತೂಕದ ಚಿನ್ನದ ಬ್ರಾಸಲೇಟ್, 12 ಗ್ರಾಂ ತೂಕದ ಪೆಂಡೇಂಟ್ ಇರುವ ರೋಪ್ ಚೈನ್, 4 ಗ್ರಾಂ ತೂಕದ ಬಿಳಿ ಹರಳು ಇರುವ ಚಿನ್ನದ ಉಂಗುರ, 3 ಗ್ರಾಂ ತೂಕದ ಪಚ್ಚೆಕಲ್ಲು ಇರುವ ಚಿನ್ನದ ಉಂಗುರ ಸೇರಿದಂತೆ 1,20 ಲಕ್ಷ ಮೌಲ್ಯದ ಒಟ್ಟು 27 ಗ್ರಾಂ ಚಿನ್ನಾಭರಣ ಹಾಗೂ 13,500 ರೂಪಾಯಿ ನಗದು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.