logo
WhatsApp Image 2026-04-02 at 14.46.04.jpeg
hindalco everlast.jpeg

ನಾಗೂರಿನ ಸಿಂಗಾರ ಗರಡಿಯ ಬಾಗಿಲು ಮುರಿದು ಹುಂಡಿಯಲ್ಲಿದ್ದ 35 ಸಾವಿರ ರೂ. ನಗದು ಕಳವುಕ

ಟ್ರೆಂಡಿಂಗ್
share whatsappshare facebookshare telegram
12 Aug 2022
post image

ಬೈಂದೂರು:

ದೈವದ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ನಗದು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಕಿರಿಮಂಜೇಶ್ವರ  ಗ್ರಾಮದ ನಾಗೂರಿನ ಸಿಂಗಾರ ಗರಡಿಯಲ್ಲಿ ನಡೆದಿದೆ. ಈ ಬಗ್ಗೆ ದೈವದ ಮನೆಯಲ್ಲಿ ಪೂಜೆ ಮಾಡಿಕೊಂಡು ಬರುತ್ತಿರುವ ನಾಗೂರಿನ ಗಣೇಶ್ ಪೂಜಾರಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ‌. ಆಷಾಢ ಮಾಸದ ಹಿನ್ನೆಲೆಯಲ್ಲಿ ಜುಲೈ 16ರಿಂದ ದೈವ ಮನೆಯಲ್ಲಿ ಯಾವುದೇ ಪೂಜೆ ನಡೆದಿರುವುದಿಲ್ಲ. ಹೀಗಾಗಿ ಆ.10ರಂದು ಸಂಜೆ 4ಗಂಟೆಗೆ ಗಣೇಶ್ ಪೂಜಾರಿ ದೈವದ ಮನೆಗೆ ಹೋಗಿದ್ದರು. ಈ ವೇಳೆ ಕಳ್ಳತನ ನಡೆದಿರುವ ವಿಚಾರ ಗೊತ್ತಾಗಿದೆ. ಕಳ್ಳರು ದೈವದ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿ ಒಳಗಡೆ ಹಾಗೂ ಹೊರಗಡೆ ಇಟ್ಟಿರುವ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಸುಮಾರು 30ರಿಂದ 35 ಸಾವಿರ ರೂ. ಹಣವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.