


ಮಂಗಳೂರು:*ಕಾರ್ಕಳದಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಶುಕ್ರವಾರ ಬೆಳಗ್ಗೆ ಪಣಂಬೂರು ಎಂಸಿಎಫ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಅದೃಷ್ಟವಶಾತ್ ಎಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಅಪಘಾತದಲ್ಲಿ ಬೆಳ್ಮಣ್ ನಿವಾಸಿ ಆದಿತ್ಯ ಎಂಬ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸಾರ್ವಜನಿಕರ ನೆರವಿನೊಂದಿಗೆ ಪಲ್ಟಿಯಾಗಿ ಚರಂಡಿಗೆ ಬಿದ್ದಿದ್ದ ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು.
ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಅಧಿಕೃತ ಪ್ರಕರಣ ದಾಖಲಾಗಿಲ್ಲ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.