logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕ ಹೆಚ್ಚಳ ಮಾಡಲ್ಲ,ಎಲ್ಲಾ ಶುಲ್ಕಗಳನ್ನು ಕೆಇಎಯಲ್ಲೆ ಪಾವತಿಸಬೇಕು . ಸಚಿವ ಅಶ್ವಥನಾರಾಯಣ

ಟ್ರೆಂಡಿಂಗ್
share whatsappshare facebookshare telegram
29 Sept 2021
post image

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕೆಯುಪಿಇಸಿಎ) ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘದ (ಕೆಆರ್ ಎಲ್‌ಎಂಪಿಸಿಎ) ಪ್ರತಿನಿಧಿಗಳ ಜತೆ ಸಭೆ ನಡೆಸಿ ನಿರ್ಧಾರ ಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. , ಈ ಮುಂಚಿನಂತೆಯೇ ಸರ್ಕಾರಿ ಕೋಟಾದಡಿ ಪ್ರವೇಶಾತಿ ಪಡೆಯುವವರಿಗೆ ರೂ 65,340, ರೂ 58,806 ಈ ಎರಡು ಸ್ಲ್ಯಾಬ್ ಗಳಲ್ಲಿ ಶುಲ್ಕಗಳು ಮುಂದುವರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಖಾಸಗಿ ಕಾಲೇಜುಗಳು 'ಇತರೆ ಶುಲ್ಕ' ನೆಪದಲ್ಲಿ ಮಿತಿಮೀರಿ ಕಟ್ಟಿಸಿಕೊಳ್ಳುವುದಕ್ಕೂ ಕಡಿವಾಣ ಹಾಕಿ, ಗರಿಷ್ಠ ಮಿತಿಯನ್ನು 20 ಸಾವಿರ ರೂಪಾಯಿಕ್ಕೆ ನಿಗದಿಪಡಿಸಲಾಗಿದೆ. ಹಲವು ಕಾಲೇಜುಗಳು ಇತರೆ ಶುಲ್ಕದ ನೆಪದಲ್ಲಿ 70 ಸಾವಿರದವರೆಗೂ ಶುಲ್ಕ ವಸೂಲಿ ಮಾಡುತ್ತಿವೆ ಎನ್ನುವ ಆರೋಪಗಳ ಹಿನ್ನಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇದಕ್ಕೆ ಕಾಲೇಜು ಸಂಘದ ಪ್ರತಿನಿಧಿಗಳು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ವಿವರಿಸಿದರು.ಇನ್ನು ಮುಂದೆ ಪ್ರವೇಶ ಶುಲ್ಕ, ಇತರೆ ಶುಲ್ಕ, ಕೌಶಲ ಶುಲ್ಕ ಇದ್ಯಾವುದನ್ನೂ ನೇರವಾಗಿ ಕಾಲೇಜಿನಲ್ಲಿ ಕಟ್ಟುವಂತಿಲ್ಲ. ಇವೆಲ್ಲವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಲ್ಲಿಯೇ ಪಾವತಿಸಬೇಕು.

ಟೂಷನ್ ಶುಲ್ಕ‌ ಸೇರಿದಂತೆ ಇತರೆ ಶುಲ್ಕವನ್ನು ಕಟ್ಟಿಸಿಕೊಳ್ಳುವ ಮುನ್ನ ಪ್ರತಿಯೊಂದು ಕಾಲೇಜೂ ಯಾವ್ಯಾವ ಉದ್ದೇಶಕ್ಕೆ ಇದನ್ನು ಕಟ್ಟಿಸಿಕೊಳ್ಳಲಾಗುತ್ತದೆ ಎಂಬುದನ್ನು ಕೆಎಇ. ತಾಂತ್ರಿಕ ಶಿಕ್ಷಣ ಇಲಾಖೆ, ವಿಟಿಯು ಗಳಿಗೆ ಮಾಹಿತಿ ಕೊಡಬೇಕು. ಇದನ್ನು ಕಾಲೇಜುಗಳಲ್ಲಿ ಕಟ್ಟಲು ಅವಕಾಶ ಇರುವುದಿಲ್ಲ. ಕೆಇಎ ಗೇ ಕಟ್ಟಬೇಕು. ಜೊತೆಗೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು ಎಂದು ಅಶ್ವತ್ಥ ನಾರಾಯಣ ಹೇಳಿದರು. ವಿಶ್ವವಿದ್ಯಾಲಯ ಶುಲ್ಕವನ್ನು ಈ ಮುಂಚೆ ಆಯಾ ಕಾಲೇಜಿನಲ್ಲಿ ಕಟ್ಟಬಹುದಿತ್ತು. ಆದರೆ, ಇನ್ನು ಮುಂದೆ ಅದನ್ನು ಕೂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲೇ (ಕೆಇಎ) ಕಟ್ಟಬೇಕು. ಈ ಮುಂಚೆ ಈ ಶುಲ್ಕ ಕಟ್ಟಿಸಿಕೊಳ್ಳುವಲ್ಲಿ ಇದ್ದ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಇನ್ನು ಕೆಲವು ಕಾಲೇಜುಗಳು ವಿದ್ಯಾರ್ಥಿಗಳನ್ನು ಉದ್ಯಮಗಳಿಗೆ ಸಜ್ಜುಗೊಳಿಸಿ ಅವರ ನೇಮಕಾತಿ ಸಾಧ್ಯತೆ ಹೆಚ್ಚಿಸುವುದಕ್ಕಾಗಿ ನೀಡುತ್ತಿದ್ದ ಹೆಚ್ಚುವರಿ ತರಬೇತಿಗಾಗಿ 'ಕೌಶಲ ಶುಲ್ಕ' (ಸ್ಕಿಲ್ ಫೀಸ್) ಕಟ್ಟಿಸಿಕೊಳ್ಳುತ್ತಿದ್ದವು. ಇದು ಐಚ್ಛಿಕವಾಗಿದ್ದು, ಒಂದೊಂದು ಕಾಲೇಜಿನಲ್ಲಿ ಒಂದೊಂದು ರೀತಿ ಶುಲ್ಕ ಇರುತ್ತಿತ್ತು. ಈಗ ಇದಕ್ಕೆ ಕೂಡ ಗರಿಷ್ಠ ರೂ 20,000 ಮಿತಿ ನಿಗದಿಗೊಳಿಸಲಾಗಿದೆ. ಇದರಲ್ಲಿ 10,000 ರೂ, 15,000 ರೂ ಹಾಗೂ 20,000 ರೂ, ಹೀಗೆ ಮೂರು ಹಂತಗಳಿರುತ್ತವೆ. ವಿ.ಟಿ.ಯು. ತಂಡವು ಕಾಲೇಜುಗಳ ಪರಿಶೀಲನೆ ನಡೆಸಿ ಯಾವ ಕಾಲೇಜಿನಲ್ಲಿ ಎಷ್ಟು ಕಟ್ಟಿಸಿಕೊಳ್ಳಬೇಕು ಎಂದು ನಿಗದಿಗೊಳಿಸಲಿದೆ. ಅದರಂತೆ ಈ ಶುಲ್ಕವನ್ನು ಕೆಇಎ ಗೆ ಕಟ್ಟಬೇಕಾಗುತ್ತದೆ ಎಂದು ವಿವರಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.