logo
WhatsApp Image 2026-04-02 at 14.46.04.jpeg
hindalco everlast.jpeg

ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ದೋಣಿಯ ವಾಡಿ ಮೇಲೆ ಬಿದ್ದು ಮೀನುಗಾರ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
1 Jun 2024
post image

ಕಾಪು: ಉದ್ಯಾವರ ಪಿತ್ರೋಡಿಯಲ್ಲಿ ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ದೋಣಿಯ ವಾಡಿ ಮೇಲೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಮೇ.30ರಂದು ನಡೆದಿದೆ.

ಮೃತ‌ ಮೀನುಗಾರನನ್ನು ಪಿತ್ರೋಡಿಯ ಉದ್ಯಾವರ ನಿವಾಸಿ ಅನಿಲ್‌ (46) ಎಂದು ಗುರುತಿಸಲಾಗಿದೆ.

ವಾಸು ಅವರಿಗೆ ಸೇರಿದ ದೋಣಿಯಲ್ಲಿ ಪಿತ್ರೋಡಿ ಪಾಪನಾಶಿನಿ ಹೊಳೆಯಲ್ಲಿ ಮೀನು ಹಿಡಿಯಲೆಂದು ತೆರಳಿದ್ದು, ಹೊಳೆಯಲ್ಲಿ ಬಲೆ ಬೀಸುತ್ತಿದ್ದಾಗ ಆಯತಪ್ಪಿ ದೋಣಿಯೊಳಗೆ ಅಳವಡಿಸಿರುವ ವಾಡಿ ಮೇಲೆ ತಲೆಕೆಳಗಾಗಿ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರ ಜತೆಗಿದ್ದ ಭರತೇಶ್‌ ಅನಿಲ್‌ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದರು. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.