logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಡ್ತಲ ಗ್ರಾಮದ ಪ್ರತಿಭೆ ಡಾ. ರಕ್ಷಾ ಕುಮಾರಿ ರಾಜ್ಯಕ್ಕೆ 7ನೇ ರ್ಯಾಂಕ್

ಟ್ರೆಂಡಿಂಗ್
share whatsappshare facebookshare telegram
7 Mar 2026
post image

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಡಾ. ರಕ್ಷಾ ಕುಮಾರಿ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS) ನಡೆಸಿದ M.D.S. ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆದಿದ್ದಾರೆ ಕಡ್ತಲ ಗ್ರಾಮದ ಶ್ರೀಮತಿ ರಕ್ಷ್ಮಿ ಆರ್. ಪ್ರಭು ಮತ್ತು ಶ್ರೀ ರವೀಂದ್ರ ಪ್ರಭು ಕಡ್ತಲ ದಂಪತಿಯ ಪುತ್ರಿಯಾಗಿರುವ ಡಾ. ರಕ್ಷಾ ಕುಮಾರಿ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಲ್ಕಾಡು ಸರ್ಕಾರಿ ಶಾಲೆಯಲ್ಲಿ ಪೂರ್ಣಗೊಳಿಸಿದರು. ಬಳಿಕ ಪ್ರೌಢ ಶಿಕ್ಷಣವನ್ನು ಶಿರ್ತಾಡಿಯ ಭುವನಜ್ಯೋತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹೆಬ್ರಿಯ ಅಮೃತಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಮುಗಿಸಿದರು. ನಂತರ ಬೆಂಗಳೂರಿನ ದಯಾನಂದ ಸಾಗರ್ ದಂತ ವೈದ್ಯಕೀಯ ಕಾಲೇಜಿನಲ್ಲಿ B.D.S. ಪದವಿಯನ್ನು ಪಡೆದು, ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ M.D.S. (Periodontics and Implantology) ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಈ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.