



ಬೆಂಗಳೂರು: ರಾಜ್ಯದ 69,899 ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಪೂರೈಸುವ ಪೌಷ್ಠಿಕ ಆಹಾರ ತಯಾರಿಕೆಗೆ ಇನ್ನು ಮುಂದೆ ಪಾಮೊಲಿನ್ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಾಗಿ ನಿನ್ನೆ (ಆ 11) ಸಿಎಂ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜತೆಗೆ ಸಿಎಂ ಸಿದ್ದರಾಮಯ್ಯ ಈ ಕುರಿತಾಗಿ ಟ್ವೀಟ್ ಕೂಡ ಮಾಡಿದ್ದಾರೆ.
ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅವಶ್ಯಕವಾದ ಲಿನೋಲಿಕ್ ಮತ್ತು ಅಲ್ಫಾ ಲಿನೋಲಿಕ್ ಆ್ಯಸಿಡ್’ಗಳು ಸೂರ್ಯಕಾಂತಿ ಎಣ್ಣೆಯಲ್ಲಿ ಇರುವ ಕಾರಣಕ್ಕಾಗಿ ಇನ್ಮುಂದೆ ಪಾಮೊಲಿನ್ ಎಣ್ಣೆ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.