

ಉಡುಪಿ: ವಿವಾದಗಳ ನಡುವೆಯೇ ಕಂಬಳಕ್ಕೆ (Kambala) ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಕರಾವಳಿಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ಘೋಷಿಸಿದೆ.
ಇನ್ಮುಂದೆ ಪ್ರತಿಯೊಂದು ಕಂಬಳಕ್ಕೂ ತಲಾ 5 ಲಕ್ಷ ಅನುದಾನ ನೀಡಲಾಗುವುದು. 2025- 26 ನೇ ಸಾಲಿನ 23 ಕಂಬಳಗಳಿಗೆ ಒಟ್ಟು 1.15 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಹಣ ರಿಲೀಸ್ ಮಾಡಲಾಗಿದೆ. ಸರ್ಕಾರದ ನಿರ್ಧಾರವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ ದೇವಿಪ್ರಸಾದ ಶೆಟ್ಟಿ (Deviprasad Shetty) ಮಾತನಾಡಿ, ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಪ್ರತಿ ಕಂಬಳಕ್ಕೂ 5 ಲಕ್ಷ ಅನುದಾನ ನೀಡಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕಂಬಳಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಕಂಬಳ ಆಯೋಜನೆ ದೊಡ್ಡ ಹೊರೆ. ಸಂಪ್ರದಾಯ, ಸಂಸ್ಕೃತಿ ತುಳುನಾಡಿನ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ಯಲು ಇದರಿಂದ ಅನುಕೂಲವಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ಪ್ರವಾಸೋದ್ಯಮ ಮತ್ತು ಕ್ರೀಡಾ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಿದ್ದರು. ಸದಾನಂದಗೌಡರು ಮುಖ್ಯಮಂತ್ರಿ ಆಗಿದ್ದಾಗ ಕಂಬಳಗಳಿಗೆ ಒಂದು ಕೋಟಿ ಅನುದಾನ ಕೊಟ್ಟಿದ್ದರು. ರಾಜಕೀಯ ಭೇದವಿಲ್ಲದೆ ಎಲ್ಲ ಸರ್ಕಾರಗಳು ಕಂಬಳವನ್ನು ಪೋಷಿಸಿವೆ. ಇದು ಕಂಬಳಕ್ಕೆ ಸರ್ಕಾರಗಳು ಕೊಟ್ಟ ಗೌರವ ಎಂದು ಬಣ್ಣಿಸಿದರು. ಮುಂದಿನ ಬಜೆಟ್ನಲ್ಲಿ ಕಂಬಳಕ್ಕೆ ಐದು ಕೋಟಿ ಅನುದಾನ ಮೀಸಲಿರಿಸಬೇಕು ಎಂಬ ಬೇಡಿಕೆ ಇದೆ. ಜೋಡುಕರೆಯಲ್ಲಿ ಎಂಟು ಸಾಂಪ್ರದಾಯಿಕ ಕಂಬಳಗಳಿವೆ. ಅವುಗಳಿಗೆ ಅನುದಾನ ಲಭ್ಯವಾಗಲಿದೆ. ಬೈಂದೂರು ಕುಂದಾಪುರ ಕಡೆಯಲ್ಲಿ ಒಂಟಿ ಕರೆ ಕಂಬಳ ನಡೆಸಲಾಗುತ್ತದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಅವರನ್ನು ಸೇರ್ಪಡೆ ಮಾಡುತ್ತೇವೆ. ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.