



ಮುಂಬೈ; ಮಹಾರಾಷ್ಟ್ರದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ಹೆಚ್ಚುತ್ತಿದ್ದು, ಈ ಹಿನ್ನೆಲೆ ಸರ್ಕಾರ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಗೆ ಆದೇಶಿಸಿದ್ದು, ಕೆಲವು ನಿರ್ಬಂಧಗಳನ್ನು ವಿಧಿಸಿದೆ. ಮುಖ್ಯವಾಗಿ ಸಾರ್ವಜನಿಕ ಸ್ಥಳಗಳಾದ ಬೀಚ್‌ಗಳು, ಉದ್ಯಾನಗಳು ಮತ್ತು ಬೀದಿಗಳಲ್ಲಿ ಸಾಮಾಜಿಕ ಅಂತರ ಮತ್ತು ನಿಯಮಿತ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು. ರೆಸ್ಟೊರೆಂಟ್‌ಗಳು, ಜಿಮ್‌ಗಳು ಮತ್ತು ಸಿನಿಮಾ ಥಿಯೇಟರ್‌ಗಳಲ್ಲಿ 50 % ರಷ್ಟು ಜನರಿಗೆ ಮಾತ್ರವೇ ಪ್ರವೇಶಾವಕಾಶ ನೀಡಲಾಗಿದೆ. ಅದೇರೀತಿ ಮದುವೆಗಳು, ಸಾಮಾಜಿಕ, ರಾಜಕೀಯ ಅಥವಾ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ, ಪಾಲ್ಗೊಳ್ಳುವವರ ಗರಿಷ್ಠ ಸಂಖ್ಯೆಯನ್ನು 50 ವ್ಯಕ್ತಿಗಳಿಗೆ ಸೀಮಿತಗೊಳಿಸಲಾಗಿದೆ. ಜನರು, ಮುಖ್ಯವಾಗಿ ಹಿರಿಯ ನಾಗರಿಕರು ಮತ್ತು ಮಕ್ಕಳು ಹೆಚ್ಚಾಗಿ ಮನೆಯಲ್ಲಿಯೇ ಇರಬೇಕು ಎಂದು ಸೂಚಿಸಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.