



ವಾಷಿಂಗ್ ಟನ್: ಉಡುಪಿ ಪುತ್ತಿಗೆ ಮಠಾಧೀಶರಾದ ಸುಗುಣೇದ್ರ ತೀರ್ಥ ಶ್ರೀಪಾದರು ತಮ್ಮ ಈ ಬಾರಿಯ ಚಾತುರ್ಮಾಸ್ಯ ವೃತವನ್ನು ಅಮೆರಿಕಾದ ಸ್ಯಾನ್ ಹೋಸೆ ಮಹಾನಗರದ ಶಾಖಾಮಠದಲ್ಲಿ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಪುರಪ್ರವೇಶ ಕಾರ್ಯಕ್ರಮವೂ ಅದ್ಧೂರಿಯಾಗಿ ನಡೆಯಿತು.
ಭಕ್ತರು ತಾಳ ತಾಂಬೂರಿಯೊಡನೆ, ಶ್ರೀಗಳೊಂದಿಗೆ ಹೆಜ್ಜೆ ಹಾಕುತ್ತಾ ಅಲಮೇಡಾ ಮುಖ್ಯ ರಸ್ತೆಯಲ್ಲಿ ಶ್ರೀ ವಿಠಲನ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟುಕೊಂಡು ಶ್ರೀ ಕೃಷ್ಣ ಬೃಂದಾವನ ಕ್ಷೇತ್ರಕ್ಕೆ ಬಂದರು.
ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ನಿಗದಿತ ಸ್ಥಳಗಳಲ್ಲಿ ಮೆರವಣಿಗೆಯನ್ನು ಮಾಡುತ್ತ ಶ್ರೀ ಕ್ಷೇತ್ರವನ್ನು ತಲುಪಿದಾಗ, ಅವರನ್ನು ಪೂರ್ಣ ಕುಂಭದಿಂದ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.