



ಬೆಂಗಳೂರು: ನಂದಿಬೆಟ್ಟದ ಆವಲಗುರ್ಕಿ ಬಳಿಯಲ್ಲಿ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿಯನ್ನು ನಡೆಸಬಾರದು ಹಾಗೂ ಈ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.ಪರಿಸರದ ಸೂಕ್ಷ್ಮ ವಲಯಕ್ಕೆ ಒಳಪಡುವ ಈ ಪ್ರದೇಶವನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಾನೂನು ಬಾಹಿರ. ಆದುದರಿಂದ, ಇಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಆದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.ಕೇಂದ್ರ ಪರಿಸರ ಸಚಿವಾಲಯ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಶಾ ಯೋಗ ಕೇಂದ್ರವೂ ಸೇರಿದಂತೆ ಹದಿನಾರು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.