



ಕಾರ್ಕಳ : ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಮೂಲಕ ಜನರನ್ನು ನಗಿಸುವ ಕಲಾವಿದರ ಬದುಕು ಮಾತ್ರ ಶೋಚನೀಯವಾಗಿದೆ. ಕಲಾವಿದರಿಗೆ ಭದ್ರತೆ ಇಲ್ಲದೆ ಪರದಾಟ ನಡೆಸುವ ಪರಿಸ್ಥಿತಿಗಳು ಇಂದು ನಿರ್ಮಾಣವಾಗುತ್ತಿದೆ ಎಂದು ಕಲಾ ಸಂಘಟಕ ಹಾಗೂ ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಉಪಾಧ್ಯಕ್ಷ ಚಂದ್ರಹಾಸ್ ಸುವರ್ಣ ಹೇಳಿದರು.
ಅವರು ಕಾರ್ಕಳ ಕಾಬೆಟ್ಟು ವೇಣು ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಕಾರ್ಕಳ ತಾಲೂಕು ಕಲಾವಿದರ ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಘಟನಾ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ ಬೈಲೂರು ಮಾತನಾಡಿ ಉಡುಪಿ ಜಿಲ್ಲೆಯಾದ್ಯಂತ ಸಾವಿರಕ್ಕೂ ಅಧಿಕ ನಾಟಕ ಕಲಾವಿದರಿದ್ದು. ಕರೋನದ ಬಳಿಕ ಸರಿಯಾದ ನಾಟಕವಿಲ್ಲದೆ ಬದುಕು ನಡೆಸುವುದೇ ಕಷ್ಟಕರವಾಗಿದೆ. ಅಲ್ಲದೆ ಕಲಾವಿದರಿಗೆ ಭದ್ರತೆ ನೀಡುವ ಜೊತೆ ಕಲಾವಿದರನ್ನು ಒಗ್ಗೂಡಿಸುವ ಕೆಲಸ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದಿಂದ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಕಲ್ಯಾಣಿ, ಉಪಾಧ್ಯಕ್ಷೆ ಲೀಲಾವತಿ ಪೊಸಲಾಯಿ, ಕಾರ್ತಿಕ್ ಕಡೆಕಾರ್, ಕೋಶಾಧಿಕಾರಿ ಶರತ್ ಉಚ್ಚಿಲ, ಕಾರ್ಯಕಾರಿ ಸಮಿತಿ ಸದಸ್ಯರಾದ ದಿನೇಶ್ ಪ್ರಭು ಕಲ್ಲೊಟ್ಟೆ, ಸುನೀಲ್ ನೆಲ್ಲಿಗುಡ್ಡೆ, ಮತ್ತಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.