



ಪುತ್ತೂರು: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಸೆರೆ ಸಿಕ್ಕಿದೆ. ಸಂಜೆ ವೇಳೆಗೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಗುರುವಾರ ಕೊಂಬಾರು ಗ್ರಾಮದ ಬಾರ್ಯ ಸಮೀಪ ಕಾಡಿನಲ್ಲಿ ಆನೆ ಕಂಡುಬಂದ ಹಿನ್ನೆಲೆಯಲ್ಲಿ ಮತ್ತೆ ಕಾರ್ಯಾಚರಣೆ ಮುಂದುವರಿಸಿದ್ದರು. ಅಪರಾಹ್ನ ಕೊಂಬಾರು ಮಂಡೆಕರ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಕಂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.