logo
WhatsApp Image 2026-04-02 at 14.46.04.jpeg
hindalco everlast.jpeg

ಕೆರ್ವಾಶೆಯಲ್ಲಿ ಗೇರುಬೀಜ ಫ್ಯಾಕ್ಟರಿಗೆ ಹೋಗುವುದಾಗಿ ತಿಳಿಸಿ ಹೋದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
17 Jun 2022
post image

ಕೆರುವಾಶೆ: ಗೇರುಬೀಜ ಫ್ಯಾಕ್ಟರಿಗೆ ಹೋಗುವುದಾಗಿ ತಿಳಿಸಿ ಹೋದ ವ್ಯಕ್ತಿಯೊಬ್ಬರು ಬಳಿಕ ಮನೆಗೆ ವಾಪಾಸು ಬಾರದೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಡೆದಿದೆ. ಕೆರ್ವಾಶೆ ಗ್ರಾಮದ ಅನುಷಾ ಎಂಬರ ಗಂಡ 37 ವರ್ಷ ಪ್ರಾಯದ ಮಹೇಶ್ ಶೆಟ್ಟಿ ನಾಪತ್ತೆಯಾದ ವ್ಯಕ್ತಿ. ಇವರು ಗೇರುಬೀಜ ಕಟ್ಟಿಂಗ್ ಮಾಡುವ ಹಾಗೂ ಹೋಟೆಲ್ ಗಳಿಗೆ ನೀರು ದೋಸೆ ತಯಾರಿಸಿ ಮಾರಾಟ ಮಾಡುವ ವ್ಯವಹಾರ ನಡೆಸುತ್ತಿದ್ದರು. ಜೂ.15ರಂದು ಬೆಳಿಗ್ಗೆ 9:45ಕ್ಕೆ ಗೇರುಬೀಜ ಪ್ಯಾಕ್ಟರಿಗೆ ಹೋಗಿ ಬರುತ್ತೇನೆಂದು ಮನೆಯಿಂದ ಹೋದವರು ಈವರೆಗೂ ಮನೆಗೆ ಬಂದಿಲ್ಲ. ಮೊಬೈಲ್‌ ಕೂಡ ಸ್ವಿಚ್ಛ್‌ ಆಫ್‌ ಆಗಿದೆ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.