logo
WhatsApp Image 2026-04-02 at 14.46.04.jpeg
hindalco everlast.jpeg

ದುಷ್ಕರ್ಮಿಗಳು ಶೂಟೌಟ್ ಮಾಡಿ ಯುವಕನ ಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
3 Mar 2024
post image

ಬ್ರಹ್ಮಾವರ: ದುಷ್ಕರ್ಮಿಗಳ ತಂಡವೊಂದು ಶೂಟೌಟ್ ಮಾಡಿ ಯುವಕನನ್ನು ಹತ್ಯೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ 9:30 ಸುಮಾರಿಗೆ ಕೃಷ್ಣ ಅವರು ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ಮನೆಗೆ ದಾಳಿ ನಡೆಸಿದ ದುಷ್ಕರ್ಮಿಗಳ ತಂಡವು ಕೃಷ್ಣ ಅವರ ಮೇಲೆ ಫೈರಿಂಗ್ ನಡೆಸಿದೆ. ಬಳಿಕ ಅಲ್ಲಿಂದ ಪರಾರಿಯಾಗಿದೆ. ಎಂದು ತಿಳಿದುಬಂದಿದೆ.

ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ ಅವರು, ಮನೆಯಲ್ಲಿ ಏಕಾಂಗಿಯಾಗಿ ವಾಸಮಾಡಿಕೊಂಡಿದ್ದರು. ಘಟನೆ ನಡೆಯುವ ಸಂದರ್ಭದಲ್ಲಿ ಅಕ್ಕ ಪಕ್ಕದ ಮನೆಯವರು ಪಟಾಕಿಯ ಶಬ್ದವೆಂದು ಸುಮ್ಮನೆ ಕುಳಿತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಾವರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.