



ಉಡುಪಿ: ಕಾಂಗ್ರೆಸ್ ವತಿಯಿಂದ 80 ಬಡಗುಬೆಟ್ಟು ಗ್ರಾಮದ ರಾಜೀವನಗರದಲ್ಲಿ ಅಳವಡಿಸಿರುವ “ಕಾಪುವಿಗಾಗಿ ಕಾಂಗ್ರೆಸ್" ಕಾರ್ಯಕ್ರಮದ ಬ್ಯಾನರ್ ನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಮಾ.10ರಂದು ಮಧ್ಯರಾತ್ರಿ ನಡೆದಿದೆ.
ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮೀ, ಅನ್ನ ಭಾಗ್ಯ, ಉಚಿತ ವಿದ್ಯುತ್ ಯೋಜನೆಯ ಜೊತೆಗೆ ಕಾಪುವಿಗಾಗಿ ಕಾಂಗ್ರೆಸ್ ಎಂಬ ಕಾರ್ಯಕ್ರಮದ ಬ್ಯಾನರ್ ನ್ನು ರಾಜೀವನಗರದ ಬಸ್ ನಿಲ್ದಾಣ ಬಳಿ ಅಳವಡಿಸಲಾಗಿತ್ತು. ಈ ಬ್ಯಾನರ್ ಅನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿದ್ದಾರೆ. ಕಿಡಿಗೇಡಿಗಳು ಬ್ಯಾನರ್ ಹರಿಯುವ ದೃಶ್ಯ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದ್ರೆ ಅದು ಅಸ್ಪಷ್ಟವಾಗಿರುವುದರಿಂದ ಕಿಡಿಗೇಡಿಗಳ ಗುರುತು ಪತ್ತೆಯಾಗಿಲ್ಲ. ಈ ಘಟನೆಯ ಬಗ್ಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.