



ಬೆಂಗಳೂರು: ಕೃಷಿ ಭೂಮಿ ಪರಿವರ್ತನೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು ಕೇಳಿ ಬರುತ್ತಿವೆ. ಅದಕ್ಕಾಗಿ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ಹಾಗೂ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ರೂಪಿಸಲಾದ ನಿಯಮಾವಳಿಗಳಿಂದ ಪ್ರಕ್ರಿಯೆಗಳು ಸರಳವಾಗಲಿವೆ. ಈ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ನಿರ್ಧಾರಿಸಲಾಗವುದು ಎಂದು ಸಚಿವರು ಹೇಳಿದ್ದಾರೆ.
ಈ ಹೊಸ ನಿಯಮಾವಳಿಯಂತೆ ಕಂದಾಯ ಇಲಾಖೆಯು ಭೂ ಪರಿವರ್ತನೆಗೆ ಅರ್ಜಿಯನ್ನು ಉಪ ಆಯುಕ್ತರಿಂದ ಯೋಜನಾ ಪ್ರಾಧಿಕಾರಕ್ಕೆ ಸಲ್ಲಿಸುತ್ತದೆ. ನಂತರ ಕಡತ ಎಲ್ಲಾ ಭೂ ಸ್ವಾಧೀನ ಅಧಿಕಾರಿಗಳಿಗೆ, ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಕೊನೆಯಲ್ಲಿ ಗ್ರಾಮ ಲೆಕ್ಕಿಗರಿಗೆ ತಲುಪಲಿದೆ ಎಂದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.