



ಮುಂಬೈ: ದೇಶದಲ್ಲಿ ಹಳದಿ ಲೋಹ ಚಿನ್ನದ ದರ ಮತ್ತೆ ಹೆಚ್ಚಳವಾಗಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇದೀಗ 53, 150 ರೂಪಾಯಿಗೆ ತಲುಪಿದೆ. ಸೋಮವಾರ 52, 450 ರೂಪಾಯಿಗಳಾಗಿತ್ತು.
ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇದೀಗ 57,980 ರೂಪಾಯಿಗೆ ತಲುಪಿದೆ. ಸೋಮವಾರ 57,220 ರೂಪಾಯಿ ಆಗಿತ್ತು.
ಅಮೆರಿಕದ ಆರ್ಥಿಕ ಪರಿಸ್ಥಿತಿ ಡೋಲಾಯಮಾನ ಹಾಗೂ ಇನ್ನಿತರ ಕಾರಣಗಳಿಂದ ಜನರು ಹೆಚ್ಚಾಗಿ ಚಿನ್ನದಲ್ಲಿ ಹೂಡಿಕೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.