



ಬೆಂಗಳೂರು : ಕಳೆದ ವಾರ ರಾಜ್ಯಾದ್ಯಂತ ಮಳೆಯಾದ ಕಾರಣ, ವಿಜಯಪುರ ಜಿಲ್ಲೆಯಿಂದ ಈರುಳ್ಳಿಯನ್ನು ದೊಡ್ಡ ಪ್ರಮಾಣದಲ್ಲಿ ನಗರದ ಯಶವಂತಪುರ ಹಾಗೂ ದಾಸರಹಳ್ಳಿ ಎಪಿಎಂಸಿಗೆ ತರಿಸುತ್ತಿರುವ ಕಾರಣದಿಂದ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆಯಲ್ಲಿ ಗಣನೀಯ ಕುಸಿತ ಕಂಡಿದೆ.
ಒಂದೆರಡು ತಿಂಗಳಿಂದ ಯಶವಂತಪುರ ಮಾರುಕಟ್ಟೆಯ ಈರುಳ್ಳಿ ವಿಭಾಗದಲ್ಲಿ ವಹಿವಾಟು ಕುಸಿದಿತ್ತು. ಆದರೆ ಇದೀಗ ಏಕಾಏಕಿ ಸೋಮವಾರದಿಂದ ಇಲ್ಲಿಗೆ ದುಪ್ಪಟ್ಟು ಪ್ರಮಾಣದಲ್ಲಿ ಈರುಳ್ಳಿ ಬರುತ್ತಿದೆ. ಕಡಿಮೆ ಗುಣಮಟ್ಟದ, ಹೆಚ್ಚು ಈರುಳ್ಳಿ ಬಂದಿರುವ ಕಾರಣಕ್ಕೆ ಬೆಲೆಯೂ ಗಣನೀಯವಾಗಿ ಕಡಿಮೆಯಾಗಿದೆ.
ಸದ್ಯ ಎಪಿಎಂಸಿಯಲ್ಲಿ ಗುಣಮಟ್ಟದ ಈರುಳ್ಳಿ ಕೆ.ಜಿ .8-10 ಇದ್ದರೆ, ಕಳಪೆಗೆ 5-8 ದರದಲ್ಲಿ ಹರಾಜಾಗುತ್ತಿದೆ. ಇದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಈರುಳ್ಳಿಗೆ .20 ಇದ್ದರೆ, ಕಳಪೆಗೆ 10-12 ಇದೆ. .100ಗೆ ಏಳು-ಎಂಟು ಕೇಜಿ ಈರುಳ್ಳಿ ಸಿಗುತ್ತಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.