logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ದೇಶದ ಬೆಳವಣಿಗೆಯಲ್ಲಿ ಐ.ಟಿ.ಐ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು : ಅಂಡಾರು ದೇವಿ ಪ್ರಸಾದ್ ಶೆಟ್ಟಿ

ಟ್ರೆಂಡಿಂಗ್
share whatsappshare facebookshare telegram
21 Apr 2022
post image

ಉಡುಪಿ, ದೇಶದ ಬೆಳವಣಿಗೆಗೆ ಕೈಗಾರಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ಐ.ಟಿ.ಐ ತರಬೇತಿ ಹೊಂದಿದ ವಿದ್ಯಾರ್ಥಿಗಳ ಭಾಗೀದಾರಿಕೆ ಉಲ್ಲೇಖನೀಯವಾದುದು ಎಂದು ಉಡುಪಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಹೇಳಿದರು. ಅವರು ಇಂದು ಮಣಿಪಾಲ ಪ್ರಗತಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಡುಪಿ ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ರಾಷ್ಟçಮಟ್ಟದ ಐ.ಟಿ.ಐ ಅಪ್ರೆಂಟಿಸ್‌ಶಿಪ್ ಮೇಳ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಒಟ್ಟಾರೆ ವ್ಯವಸ್ಥೆಗೆ ಅಗತ್ಯವಾಗಿರುವ ಅನುಭವಿ ಕುಶಲಕರ್ಮಿಗಳಲ್ಲಿ ಶೇ.80 ರಷ್ಟು ಮಂದಿಯನ್ನು ನೀಡುವುದು ಐ.ಟಿ.ಐ ಕಾಲೇಜುಗಳು. ಐ.ಟಿ.ಐ ಕಾಲೇಜುಗಳಲ್ಲಿನ ತರಬೇತಿ ಅವಧಿಯಲ್ಲಿ ಹೆಚ್ಚು ಅವಧಿಯನ್ನು ಪ್ರಾಯೋಗಿಕ ತರಗತಿಗಳಿಗೆ ನೀಡುವುದರಿಂದ, ಸಹಜವಾಗಿ ಅಲ್ಲಿ ಕಲಿತ ವಿದ್ಯಾರ್ಥಿಗಳು ವೃತ್ತಿಯಲ್ಲಿ ನಿಪುಣತೆ ಗಳಿಸಿರುವುದರಿಂದ ಅವರಿಗೆ ಹೆಚ್ಚು ಅವಕಾಶ ದೊರಕುತ್ತದೆ ಎಂದರು. ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಮಾತನಾಡಿ, ವಿದ್ಯಾರ್ಥಿಗಳು ಕೇವಲ ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗಿರಬಾರದು. ಇದರ ಜೊತೆಗೆ ಸಾಮಾನ್ಯ ಜ್ಞಾನ, ವ್ಯಾವಹಾರಿಕಾ ಜ್ಞಾನ ಹೊಂದಿರಬೇಕು. ಇದು ನಂತರದಲ್ಲಿ ಉದ್ಯೋಗ ಪಡೆಯಲು ಸಹಕಾರಿಯಾಗುತ್ತದೆ. ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವುದರ ಜೊತೆಗೆ ಉದ್ಯೋಗ ಕಲ್ಪಿಸಿ ಕೊಡುವಲ್ಲಿಯೂ ನೆರವಾಗಬೇಕು. ಇದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಜೀವನ ರೂಪಿಸಿಕೊಳ್ಳುವಂತಾಗಬೇಕು ಎಂದರು. ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಐ.ಎಂ.ಸಿ ಯ ಅಧ್ಯಕ್ಷ ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಉದ್ಯೋಗದ ಹುಡುಕಾಟದಲ್ಲಿರುವ ಬಹಳಷ್ಟು ಯುವಜನತೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಈ ಅಪ್ರೆಂಟಿಸ್‌ಶಿಪ್ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಯುವಜನರು ಇಲ್ಲಿಯೇ ಉದ್ಯೋಗ ಪಡೆದು ತಮ್ಮ ಸಂಸ್ಥೆಯಲ್ಲಿ ನಿಷ್ಠಾವಂತರಾಗಿ ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಉಪಸ್ಥಿತರಿದ್ದರು. ಉಡುಪಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಗದೀಶ್ ಸ್ವಾಗತಿಸಿದರು, ರಾಜೇಶ್ ಕೆ.ಸಿ ನಿರೂಪಿಸಿದರು, ಸತೀಶ್ ಎಸ್ ವಂದಿಸಿದರು. ಶಿಶಿಕ್ಷÄ ಮೇಳದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಬೇರೆ ಬೇರೆ ಕ್ಷೇತ್ರದ ಉದ್ಯೋಗದಾತರು, ಕಾರ್ಖಾನೆ ಹಾಗೂ ಕಂಪೆನಿಯವರು ಬಂದಿದ್ದರು. ಜಿಲ್ಲೆಯ ವಿವಿಧ ಐಟಿಐ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ನೊಂದಣೆ ಮಾಡಿಕೊಂಡಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.