



ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ರಿಷಬ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ‘ಲಾಫಿಂಗ್ ಬುದ್ದ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಕಡೆ ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ಕಾಂತಾರ ಸಿನಿಮಾದ ಚಿತ್ರೀಕರಣಕ್ಕೆ ರೆಡಿ ಆಗುತ್ತಿದ್ದರೆ, ಮತ್ತೊಂದು ಕಡೆ ತಮ್ಮದೇ ನಿರ್ಮಾಣದ ಲಾಫಿಂಗ್ ಬುದ್ದ ಚಿತ್ರೀಕರಣ ಕಂಪ್ಲೀಟ್ ಮಾಡಿದ್ದಾರೆ.
ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.
ಕಾಮಿಡಿ ಹಾಗೂ ಡ್ರಾಮಾ ಜಾನರ್’ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.