



ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಜನವಸತಿಗಳ ಪೈಕಿ ಹಲವಾರು ಜನವಸತಿಗಳು ವಿಶೇಷವಾಗಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ನಾಯಕರ ಹಟ್ಟಿ, ಕುರುಬರ ಹಟ್ಟಿ, ಹಾಡಿ, ಮಜರೆ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಟ್ಟಿರುವ ಜನವಸತಿಗಳು ದಾಖಲೆರಹಿತವಾಗಿಯೇ ಸಮಾಜದ ಮುಖ್ಯ ವಾಹಿನಿಗೆ ಬರದೇ ಉಳಿದುಕೊಂಡಿರುತ್ತಾರೆ ಎಂದಿದ್ದಾರೆ.
ಇನ್ನೂ ಇಂತಹ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಅಥವಾ ಅಸ್ತಿತ್ವದಲ್ಲಿರುವ ಕಂದಾಯ ಗ್ರಾಮದ ಭಾಗವಾಗಿ ಪರಿವರ್ತಿಸಿ ಅಲ್ಲಿನ ನಿವಾಸಿಗಳಿಗೆ ವಾಸ್ತವ್ಯದ ಹಕ್ಕು ದಾಖಲೆಗಳನ್ನು ಒದಗಿಸಿ, ಆ ಕುಟುಂಬಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹೇಳಿದ್ದಾರೆ.ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಲ ಕಾಲಕ್ಕೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸುತ್ತಿದೆ. ಸರ್ಕಾರವು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕಲಂ 38ಎ ಮತ್ತು ನಿಯಮ 9ಸಿ ಸೇರ್ಪಡೆಗೊಳಿಸುವ ಮೂಲಕ ಖಾಸಗಿ ಜಮೀನಿನಲ್ಲಿ ನೆಲೆಗೊಂಡಿರುವ ದಾಖಲೆರಹಿತ ಜನವಸತಿ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.