



ಕೊರೋನಾ ಕಾರಣದಿಂದಾಗಿ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದಂತ ಸಿಪಿ, ತಾ.ಪಂ ಮತ್ತು ಜಿಲ್ಲಾ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್, ಉಪ ಮೇಯರ್ ಹಾಗೂ ಪದಾಧಿಕಾರಿಗಳ ಚುನಾವಣೆಗೆ ಬ್ರೇಕ್ ಹಾಕಲಾಗಿತ್ತು.ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಮಾಹಿತಿ ನೀಡಿದ್ದು, ದಿನಾಂಕ 20-09-2021ರಂದು ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ, ರಾಜ್ಯದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್, ಉಪ ಮೇಯರ್ ಹಾಗೂ ಪದಾಧಿಕಾರಿಗಳ ಚುನಾವಣೆಗಳನ್ನು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ನಡೆಸಲು ಸಚಿವ ಸಂಪುಟವು ನಿರ್ಧರಿಸಿದೆ. ಸಹಕಾರ ಸಂಘಗಳು, ನೋಂದಾಯಿತ ಸೊಸೈಟಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು ಒಳಗೊಂಡಂತೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳನ್ನು ನಡೆಸಲು ಸಹ ಸಚಿವ ಸಂಪುಟವು ನಿರ್ಧರಿಸಿತು ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಹಕಾರ ಸಂಘಗಳು, ನೋಂದಾಯಿತ ಸೊಸೈಟಿಗಳ ಅಧ್ಯಕ್ಷ, ಉಪಾಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.