



ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಸರಕಾರ ತನ್ನ ವಶಕ್ಕೆ ಪಡೆದು ಅಧಿಕೃತ ಸರಕಾರಿ ಆದೇಶವನ್ನು ಹೊರಡಿಸಿದೆ. ಸಚಿವ ಸಂಪುಟ ಸಭೆಯ ನಿರ್ಣಯದಂತೆ ಆಸ್ಪತ್ರೆಯ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆದುಕೊಂಡಿದೆ. ಇದರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನನ್ನು ಸಹ ಸರಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಅಲ್ಲದೇ ಆಸ್ಪತ್ರೆಯ ಕಟ್ಟಡದ ಸಂಪೂರ್ಣ ನಿರ್ವಹಣೆ ಹಾಗೂ ಇತರ ಜವಾಬ್ದಾರಿಗಳನ್ನು ಸರಕಾರವೇ ವಹಿಸಿಕೊಂಡಿದೆ.
ಈ ಆಸ್ಪತ್ರೆಯ ವಾರ್ಷಿಕ ನಿರ್ವಹಣಾ ವೆಚ್ಚ 7 ಕೋಟಿ ರೂ. ಹಾಗೂ ಅವಶ್ಯವಿರುವ ಮಾನವ ಸಂಪನ್ಮೂಲಗಳಿಗೆ ಅವರ್ತಕ ವೆಚ್ಚವಾಗಿ ವಾರ್ಷಿಕ 2.83 ಕೋಟಿ ರೂ. ಸೇರಿದಂತೆ ಒಟ್ಟು 9.83 ಕೋಟಿ ರೂ.ಗಳ ಅನುದಾನವನ್ನು ರಾಜ್ಯ ವಲಯದಿಂದ ಭರಿಸುವುದು ಹಾಗೂ 200 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅವಶ್ಯವಿರುವ ಹುದ್ದೆಗಳನ್ನು ಸರಕಾರದ ವತಿಯಿಂದ ಭರ್ತಿ ಮಾಡುವ ಬಗ್ಗೆ ಸರಕಾರ ಆದೇಶದಲ್ಲಿ ಸಹಮತಿಯನ್ನು ವ್ಯಕ್ತಪಡಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.