



ಬೆಂಗಳೂರು: ಮೈಕ್ರಾನ್ ವೈರಸ್ ಭೀತಿ ಹಿನ್ನೆಲೆ ಹೊಸ ಮಾರ್ಗಸೂಚಿ ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ
ಮೈಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತಾಡಿದ ಸಚಿವ ಆರ್. ಅಶೋಕ್, ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು. ಹಾಗೆ, ಇನ್ಮುಂದೆ ಶಾಲೆಗಳಲ್ಲಿ ಯಾವುದೇ ಸಭೆ- ಸಮಾರಂಭ ನಡೆಸುವಂತಿಲ್ಲ ಎಂದು ಸೂಚನೆ ನೀಡಿದರು.
ಸಿನಿಮಾ, ಮಾಲ್ ಗಳಲ್ಲಿ ವ್ಯಾಕ್ಸಿನೇಷನ್ ಆದವರಿಗೆ ಮಾತ್ರ ಅವಕಾಶ. ಚಿತ್ರಮಂದಿರಕ್ಕೆ ಪ್ರವೇಶಿಸಲು ಲಸಿಕೆ ಕಡ್ಡಾಯ ಎಂದರು.
ಮದುವೆ, ಸಮಾರಂಭಗಳಿಗೆ ಹೊಸ ರೂಲ್ಸ್: ಮದುವೆ, ಸಮಾರಂಭಗಳಲ್ಲಿ 500 ಜನರಿಗಷ್ಟೇ ಸೀಮಿತ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಟೆಸ್ಟಿಂಗ್ ಕಡ್ಡಾಯ. ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಕಡ್ಡಾಯ. ಪ್ರತಿನಿತ್ಯ 1 ಲಕ್ಷ ಕೋವಿಡ್ ಟೆಸ್ಟ್ ಮಾಡುವಂತೆ ಸೂಚನೆ ನೀಡಿದ್ದೇವೆ. ಇದಕ್ಕಾಗಿ ರಾಜ್ಯದಲ್ಲಿ ಮತ್ತೆ ಕಂಟ್ರೋಲ್ ರೂಂ ಆರಂಭಿಸಲು ಆದೇಶಿಸಿದ್ದೇವೆ ಎಂದು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.