



ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ 2ನೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2024 ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಬಿ.ಆರ್ಚ್(99.744) ಪರ್ಸಂಟೈಲ್ ಪಡೆದು ಜಿಲ್ಲೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾಳೆ.
ಜೆಇಇ 2ನೇ ಪ್ರವೇಶ ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಣವ್ ಅಡಿಗ 95.33 ಪರ್ಸಂಟೈಲ್( 97.12) ಪರ್ಸಂಟೈಲ್(ಭೌತಶಾಸ್ತ್ರ)ಆದಿತ್ಯ ಸಿ.ಚಂದನ್ 95.97 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 95.84, ಲಲನ್ ಪಿ. 93.15 ಪರ್ಸಂಟೈಲ್,ಪ್ರಜ್ವಲ್ ಎಸ್.ಪೂಜಾರಿ 93.02 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.