



ನವದೆಹಲಿ : ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರದಿಂದ 50,000 ರೂ. ಪರಿಹಾರ ನೀಡಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಮಾತ್ರವಲ್ಲ, ಈಗಾಗಲೇ ಮೃತಪಟ್ಟವರ ಕುಟುಂಬದವರು ಮಾತ್ರವಲ್ಲದೆ ಭವಿಷ್ಯದಲ್ಲಿ ಕೊರೋನಾ ಸಾವುಗಳಿಗೂ ಪರಿಹಾರವನ್ನು ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಪರಿಹಾರ ಪಡೆಯಲು ಅರ್ಹರಾದ ಕುಟುಂಬದವರು ಆಯಾ ಜಿಲ್ಲೆಗಳ ವಿಪತ್ತು ನಿರ್ವಹಣಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ, ವೈದ್ಯಕೀಯ ಪ್ರಮಾಣಪತ್ರದೊಂದಿಗೆ 'ಕೊರೊನಾದಿಂದ ಸಾವು' ಎಂದು ನಮೂದಿಸುವ ಪ್ರಮಾಣಪತ್ರವನ್ನು ಸಲ್ಲಿಸಬೇಕು ರಾಜ್ಯ ಸರ್ಕಾರಗಳು ಈ ಮೊತ್ತವನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ನೀಡುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.