



ವಿಶ್ವಸಂಸ್ಥೆ/ಜಿನೀವಾ: ‘ಕೋವಿಡ್–19 ಈಗ ಜಾಗತಿಕ ಆರೋಗ್ಯ ತುರ್ತು ಸ್ಥಿತಿ ಅಲ್ಲ ಎಂದು ವಿಶ್ವಸಂಸ್ಥೆ ಶುಕ್ರವಾರ ಘೋಷಿಸಿದೆ.
ಜಗತ್ತಿನಾದ್ಯಂತ 70 ಲಕ್ಷ ಜನರ ಪ್ರಾಣ ತೆಗೆದಿದ್ದ ಈ ರೋಗವು, ಎಲ್ಲ ದೇಶಗಳನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿತ್ತು.
ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ ಆರೋಗ್ಯ ನಿಯಮಾವಳಿ (2005) ತುರ್ತು ಸಮಿತಿಯು ಗುರುವಾರ 15ನೇ ಬಾರಿಗೆ ಸಭೆ ಸೇರಿ ಈ ಶಿಫಾರಸು ಮಾಡಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.
ಕೋವಿಡ್‌ನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಇಳಿಕೆ, ಕೊರೊನಾ ಸೋಂಕಿನ ಕಾರಣ ಆಸ್ಪತ್ರೆಗೆ ದಾಖಲಾಗುತ್ತಿರುವವರು ಹಾಗೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.