logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಬಾರ್ಕೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳ್ಳತನ

ಟ್ರೆಂಡಿಂಗ್
share whatsappshare facebookshare telegram
21 Oct 2022
post image

ಬ್ರಹ್ಮಾವರ : ತಾಲೂಕಿನ ಹನೇಹಳ್ಳಿ ಗ್ರಾಮದ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೊಠಡಿಯ ಸಿಸಿಟಿವಿ ಡಿವಿಆರ್ ಕಳವು ಮಾಡಿರುವ ಘಟನೆ ಅ.20ರಂದು ಬೆಳಿಗ್ಗೆ 8.30ಕ್ಕೆ ಕಂಡುಬಂದಿದೆ. ಈ ಬಗ್ಗೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶಿವಕುಮಾರ್ ಬಿ.ಎಸ್. ಅವರು ದೂರು ದಾಖಲಿಸಿದ್ದಾರೆ. ಅ.19ರ ಸಂಜೆ 5:30 ಗಂಟೆಯಿಂದ ಅ.20ರ ಬೆಳಿಗ್ಗೆ 08:30 ಗಂಟೆಯ ಮಧ್ಯಾವಧಿಯಲ್ಲಿ ಯಾರೋ ಕಳ್ಳರು ಕಾಲೇಜಿನ ಪ್ರಾಂಶುಪಾಲರ ಕೊಠಡಿ ಹಾಗೂ ಕಛೇರಿಯ ಬಾಗಿಲಿಗೆ ಹಾಕಿದ ಬೀಗವನ್ನು ಒಡೆದು ಒಳನುಗ್ಗಿ, ಕಛೇರಿಯಲ್ಲಿನ  2 ಕಪಾಟುಗಳ ಬೀಗ ಮುರಿದು ಹುಡುಕಾಡಿದ್ದು, 3 ಮೇಜು ಡ್ರಾವರುಗಳ ಬೀಗಗಳನ್ನು ಮುರಿದು ಚೆಲ್ಲಾಪಿಲ್ಲಿ ಮಾಡಿರುತ್ತಾರೆ. ಪ್ರಾಂಶುಪಾಲರ ಮೇಜಿನ 2 ಡ್ರಾವರುಗಳನ್ನು ತೆರೆದು ಡ್ರಾವರನ್ನು ಹುಡುಕಾಡಿರುವುದು ಕಂಡು ಬಂದಿದೆ.. ಅಲ್ಲದೇ ಪ್ರಾಂಶುಪಾಲರ ಕೊಠಡಿಯಲ್ಲಿನ ಸಿ.ಸಿ.ಟಿ.ವಿ.ಯ ಡಿವಿಆರ್‌ನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.. ಕಳುವಾದ ಡಿವಿಆರ್‌ನ  ಮೌಲ್ಯ ರೂಪಾಯಿ 7000 ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.