



ಬೈಂದೂರು:
ತೆಗ್ಗರ್ಸೆ ಗ್ರಾಮದ ಹಾಗೂ ಹೊಸೂರಿನ ದೇವ ಸ್ಥಾನಗಳಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಂಬದ ಕೋಣೆಯ ನಿವಾಸಿ 23 ವರ್ಷದ ಕರುಣಾಕರ ದೇವಾಡಿಗ ಎಂದು ಗುರುತುಸಿಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ತಗರ್ಸೆ ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನ ಹಾಗೂ ಹೊಸೂರು ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ತಗರ್ಸೆ ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದೆ 32 ಸಾವಿರ ರೂ. ಮೌಲ್ಯದ ದೇವರ ಆಭರಣ ಹಾಗೂ 10ಸಾವಿರ ನಗದು ಕಳ್ಳತನವಾಗಿತ್ತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.